ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಕೇಂದ್ರ ಸರಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ 1971 ಮತ್ತು ಭಾರತದ ಧ್ವಜ ಸಂಹಿತೆ 2002ರಡಿ ಎಲ್ಲಾ ಸರಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟ‌ಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಕಾರ್ಯಕ್ರಮಗಳ ನಂತರ ಉಪಯೋಗಿ‌ಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ 1986ರ ಸೆಕ್ಷನ್ 19ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್