ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50ರಷ್ಟು ಸ್ಯಾಂಪಲ್ಸ್ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಸ್ಯಾಂಪಲ್ಸ್ ವರದಿಗಾಗಿ ಕಾಯಲಾಗುತ್ತಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ