ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ಉಡುಪಿ : ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಪ್ರಧಾನ ಸಿವಿಲ್ ಹಾಗೂ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿನಾಯಕ್ ವಾಂಖಾಂಡೆ ಮತ್ತು ಹೆಚ್ಚುವರಿ ಸಿವಿಲ್ ಹಾಗು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್‌ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.

ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗು ಹೆಚ್ಚುವರಿ ಮುಖ್ಯ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ಮನು ಪಟೇಲ್ ಬಿವೈ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾ‌ರ್ ಶೆಟ್ಟಿ ಉಪಸ್ಥಿತರಿದ್ದರು.

ಹಿರಿಯ ವಕೀಲರಾದ ಎನ್.ಕೆ ಆಚಾರ್ಯ ಹಾಗು ಹೆಚ್‌.ರಾಘವೇಂದ್ರ ಶೆಟ್ಟಿ ಶುಭಾಸಂಶನೆಗೈದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾ‌ರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಎಆ‌ರ್ ವಂದಿಸಿದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ

ಜನನ ಮರಣ ಘಟನೆಗಳ ನೋಂದಣಿ ಕಡ್ಡಾಯ – ಡಿಸಿ ಡಾ. ವಿದ್ಯಾಕುಮಾರಿ