ಬಾರ್ ಮಾಲಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ-ರಮಾನಂದ್ ಶೆಟ್ಟಿ ಪತ್ನಿ ಅಶ್ವಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ತಂದೆ ತಾಯಿ ಮೃತ್ಯು-ಮಕ್ಕಳು ಅನಾಥ

ಉಡುಪಿ : ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ ರಮಾನಂದ್ ಶೆಟ್ಟಿ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಕೂಡ ಮೃತಪಟ್ಟಿದ್ದು ಕುಟುಂಬದಲ್ಲಿ ಶೋಕ ಮುಗಿಲು ಮುಟ್ಟಿದೆ.

ಉಡುಪಿ ನಗರದಲ್ಲಿ ವಾಸ ಮಾಡುತ್ತಿದ್ದ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕ ರಮಾನಂದ್ ಶೆಟ್ಟಿ ಮನೆಯಲ್ಲಿ ನಿನ್ನೆ ಮುಂಜಾನೆ ಶಾರ್ಟ್ ಸರ್ಕ್ಯುಟ್‌ನಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಮನೆಯಲ್ಲಿದ್ದ ರಮಾನಂದ್ ಶೆಟ್ಟಿ – ಅಶ್ವಿನಿ ದಂಪತಿಯ ಮಕ್ಕಳಿಬ್ಬರನ್ನು ರಕ್ಷಣೆ ಮಾಡಲಾಗಿತ್ತು.

ಅಗ್ನಿ ಅವಘಡದಿಂದ ಮನೆಯೊಳಗೆ ದಟ್ಟ ಹೊಗೆ ಆವರಿಸಿ ದಂಪತಿ ಅಸ್ವಸ್ಥಗೊಂಡಿದ್ದರು. ರಮಾನಂದ್ ಶೆಟ್ಟಿ ಆಸ್ಪತ್ರೆಯಲ್ಲಿ ನಿನ್ನೆಯೇ ಮೃತಪಟ್ಟಿದ್ದರೆ, ಪತ್ನಿ ಅಶ್ವಿನಿ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಬೆಂಕಿಯ ಕೆನ್ನಾಲೆಗೆಗೆ ಅವರಿಗೆ ಉಸಿರಾಡಲು ಸಾಧ್ಯವಾಗದೆ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಅಶ್ವಿನಿ ಮೃತಪಟ್ಟಿದ್ದಾರೆ..

ಸದ್ಯ ಇಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳುದುಬಂದಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು