ಗಾಂಧಿ ಜಯಂತಿ ಪ್ರಯುಕ್ತ ಸೋಮೇಶ್ವರ ಬೀಚ್‌ನಲ್ಲಿ ‘ಬೀಚ್ ಸ್ವಚ್ಚತೆ’

ಮಂಗಳೂರು : ಜಿಲ್ಲಾಡಳಿತ ಮತ್ತು ನೆಹರು ಯುವಕ ಕೇಂದ್ರ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಮಂಗಳೂರು ಸೋಮೇಶ್ವರ ಪಟ್ಟಣ ಪಂಚಾಯತ್ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಇಂದು ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವಜನ ಸೇವಾ ಕ್ರೀಡಾ ಅಧಿಕಾರಿ ಶ್ರೀ ಪ್ರದೀಪ್ ಡಿಸೋಜ, ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಮಹೇಶ್ ಅಂಬೆಕಲ್, ನೆಹರು ಯುವಕ ಕೇಂದ್ರದ ಶ್ರೀ ಜಗದೀಶ್ ಸೈಂಟ್ ಅಗ್ನೆಸ್ ಕಾಲೇಜಿನ ಶ್ರೀ ಉದಯಕುಮಾರ್ ಶೆಟ್ಟಿ, ಸೋಮೇಶ್ವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀ ಮತ್ತಡಿ ಉಪಸ್ಥಿತರಿದ್ದರು.

ವೀರ ಮಾರುತಿ ವ್ಯಾಯಾಮ ಶಾಲೆ ಮತ್ತು ಸ್ಪೋರ್ಟ್ಸ್ ಕ್ಲಬ್ ತೊಕ್ಕೊಟ್ಟು, ಯುವತಿ ಮಂಡಲ ಸೋಮೇಶ್ವರ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿ‌ಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Related posts

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ