ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಹುಚ್ಚಾಟ, ಪೊಲೀಸರಿಂದ ಸುರಕ್ಷತೆಯ ಪಾಠ

ಕುಂದಾಪುರ : ಉಡುಪಿ ಜಿಲ್ಲೆಯ ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟವು ತೀವ್ರತೆ ಪಡೆದುಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ದವಾಗಿದ್ದು, ಪ್ರವಾಸಿಗರು ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ.

ಗಂಗೊಳ್ಳಿ ಠಾಣೆಯ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಅವರು ಸ್ಥಳದಲ್ಲಿದ್ದ ಪ್ರವಾಸಿಗರಿಗೆ ಸುರಕ್ಷತೆಯ ಪಾಠವನ್ನು ಕಲಿಸಿದರು. ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬೀಚ್‌ಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆಯಲ್ಲಿ ನೀರಿಗಿಳಿಯಲು ನಿರ್ಬಂಧವಿದ್ದರೂ, ಪ್ರವಾಸಿಗರು ಎಚ್ಚರಿಕೆ ಫಲಕವಿದ್ದರೂ ಕ್ಯಾರೆ ಅನ್ನದೇ ಸಮುದ್ರಕ್ಕೆ ಇಳಿಯುತ್ತಿದ್ದಾರೆ.

ಭಾರಿ ಗಾತ್ರದ ಅಲೆಗಳು ಬರುವಾಗ ಸೆಲ್ಫೀ ತೆಗೆಯುವ ಸಾಹಸ ಮಾಡುವ ಪ್ರವಾಸಿಗರು ತಮ್ಮ ಜೀವಕ್ಕೆ ಕುತ್ತು ತರುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ