ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ : ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ, ಸಾಮಾಜಿಕ, ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಈ ಎಲ್ಲಾ ಸಾಧನೆಯನ್ನು ಗುರುತಿಸಿ, ರಾಜ್ಯಮಟ್ಟದ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸುರೇಶ ಗೊಲ್ಲಾ ತಿಳಿಸಿದ್ದಾರೆ.

ಬೆಂಗಳೂರಿನ ಜ್ಞಾನಭಾರತಿ ಆವರಣದ ಪ್ರೋ. ವೆಂಕಟಗಿರಿ ಗೌಡ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣೇಶ ಪ್ರಸಾದ್ ಕೊಡಿಬೆಟ್ಟು ಇವರು ಕೊಡಿಬೆಟ್ಟು ದಿ. ದೇವದಾಸ್ ನಾಯಕ್ ಹಾಗೂ ಡಿ. ಶಾಂತ ನಾಯಕ್ ಇವರ ಪುತ್ರ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ