ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದ ಎದುರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ, ಜಿಲ್ಲಾ ನಿರೂಪಣ ಅಧಿಕಾರಿ ಅನುರಾಧ ಹಾದಿಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು, ಜಿಲ್ಲಾಡಳಿತದ ಸಿಬ್ಬಂದಿಗಳು, ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.