ಕಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ : ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಬೈಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಜೆ ವೇಳೆ ನಡೆದಿದೆ.

ಮೃತಪಟ್ಟ ಬೈಕ್‌ ಸವಾರನನ್ನು ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ‌. ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರ್‌ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಬಂದು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ