ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು

ಕಾರ್ಕಳ : ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅಪಘಾತ ಸಂದರ್ಭ ಶಾಲೆಯ ಬಸ್‌ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ ಎನ್ನಲಾಗಿದೆ‌. ಅಪಘಾತದ ಪರಿಣಾಮ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ