ಡಿವೈಡರ್‌ಗೆ ಬೈಕ್‌ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತಪಟ್ಟ ಬೈಕ್‌ ಸವಾರ.

ಸುಧೀಶ್‌ ಅವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದು, ಗುರುವಾರ ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯಾಗಿದೆ. ತಲೆಗೆ ಪೆಟ್ಟು ತಗಲಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ