ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಬಿಬಿಎ ವಿದ್ಯಾರ್ಥಿ ಮೃತ್ಯು

ಮಂಗಳೂರು : ಲಾರಿ ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ.

ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ ಕೂಳೂರಿನಿಂದ ಕೆಪಿಟಿ ಕಡೆಗೆ ಸಂಚರಿಸುತ್ತಿದ್ದರು. ಸಂಜೆ 4ಗಂಟೆ ಸುಮಾರಿಗೆ ಕುಂಟಿಕಾನ ಪ್ಲೈಓವರ್ ಬಳಿ ಬರುತ್ತಿದಂತೆ ಅದೇ ಬದಿಯಲ್ಲಿ ಬರುತ್ತಿದ್ದ ಲಾರಿ ನಿರ್ಲಕ್ಷತನ ಮತ್ತು ಅಜಾಗರೂಕತೆಯಿಂದ ಬಂದು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದ ಮೊಹಮ್ಮದ್ ಜಾಸಿಂರವರಿಗೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಶಾಹಿದ್ ಸುಲೇಮಾನ್‌ರವರಿಗೆ ಬಲಗಾಲಿನ ಮೂಳೆ ಮುರಿತಗೊಂಡು ಗಾಯಗೊಂಡಿದ್ದಾನೆ. ಈ ಬಗ್ಗೆ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ