ಬೈಕ್ ಕಳವು ಪ್ರಕರಣ – ಆರೋಪಿ ಬಂಧನ

ಮಣಿಪಾಲ : ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪುತ್ತೂರು ನಿವಾಸಿ ಪ್ರಕಾಶ್ ನಾಯಕ್ ಬಂಧಿತ ಆರೋಪಿ.

ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂದಿಸಿ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಮಣ್ಣಪಳ್ಳ ಎಂಜೆಸಿ ಕಾಲೇಜು ಬಳಿ ಬರುತ್ತಿದ್ದ ವ್ಯಕ್ತಿಯ ನಡುವಳಿಕೆಯ ಮೇಲೆ ಸಂಶಯಗೊಂಡ ಪೊಲೀಸರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಆತನ ಪೂರ್ವಾಪರ ಪರೀಕ್ಷಿಸಿದ ಪೊಲೀಸರಿಗೆ ಆತನ ಕೈಯಲ್ಲಿದ್ದ ಬೈಕ್ ಕಳವು ಮಾಡಿರುವುದು ತಿಳಿದು ಬಂದಿದೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಬೈಕ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ