ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌..!!

ಉಡುಪಿ : ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬಳ ಬಿಕಿನಿ ಫೋಟೋಶೂಟ್‌ ಈಗ ವಿವಾದದ ಸ್ವರೂಪ ಪಡೆಯುತ್ತಿದೆ. ಈ ಯುವತಿ ಫೋಟೋಶೂಟ್ ಮಾಡುತ್ತಿರುವಾಗ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಸ್ವತಃ ಯುವತಿ ಆರೋಪಿಸಿದ್ದಾರೆ.

ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಮಾಹಿತಿಯನ್ನು ಯುವತಿ ಹಂಚಿಕೊಂಡಿದ್ದಾರೆ. ಈಕೆ ಹೊರರಾಜ್ಯದ ಮಾಡೆಲ್ ಎನ್ನಲಾಗಿದೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು? ಬೀಚ್‌ ಸಾರ್ವಜನಿಕ ಪ್ರದೇಶದಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಜಾಲತಾಣದಲ್ಲಿ ಯುವತಿ ಪೊಲೀಸರಿಗೆ ಪ್ರಶ್ನೆ ಮಾಡಿದ್ದಾಳೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ