ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ

ಬ್ರಹ್ಮಾವರ : ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ‌ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದ ಬೈಂದೂರು ಮಂಡಲ ಅಧ್ಯಕ್ಷ ಅಂತೋನಿ ಡಿಸೋಜ, ವಿಜಯ ಬಾಲ ನಿಕೇತನದ ಉಪಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಮಟಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ