ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಪರಿಶ್ರಮ ಸದಾ ಸ್ಮರಣೀಯ : ಎಂ.ಕೆ. ವಿಜಯಕುಮಾರ್; ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾ‌ರ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ತುರ್ತು ಪರಿಸ್ಥಿತಿ ವಿರೋಧಿಸಿ ರಚನೆಯಾದ ಜನತಾ ಪಕ್ಷದ ಸರ್ಕಾರ ಪತನಗೊಂಡ ಸಂದರ್ಭದಲ್ಲಿ ಅಂದಿನ ನಾಯಕರು ನಡೆದುಕೊಂಡ ರೀತಿ ಆದರ್ಶ ರಾಜಕಾರಣಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ಮತ್ತು ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಎ.10ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಏ.10ರ ಬೆಳಿಗ್ಗೆ 9.30ಕ್ಕೆ ಉಡುಪಿ ರಾಜಾಂಗಣ ಪಾರ್ಕಿಂಗ್ ಪ್ರದೇಶದಿಂದ ಬೃಹತ್ ಜಾಥಾ ಆರಂಭಗೊಂಡು ಕಲ್ಸಂಕ ಮಾರ್ಗವಾಗಿ ಸಾಗಿ ಕಡಿಯಾಳಿಯಲ್ಲಿ ಸಮಾಪನಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪ್ರತಿಭಟನಾ ಸಭೆ ನಡೆಯಲಿದೆ. ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸೇರಿ ಜನಾಕ್ರೋಶ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋ‌ರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕರಾದ ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾ‌ರ್ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾ‌ರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಟ ರಿಷಬ್ ಶೆಟ್ಟಿಗೆ ವಾರಾಹಿ ಪಂಜುರ್ಲಿ ದೈವದ ಖಡಕ್ ಎಚ್ಚರಿಕೆ…!!

ಕೇಸರಿ ಬಟ್ಟೆಯ ಕೊಲಾಜ್‌ನಲ್ಲಿ ಮೂಡಿ ಬಂದ ಶ್ರೀ ರಾಮ

ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ