ಮನಪಾ ಮೇಯರ್ ಅಭ್ಯರ್ಥಿಗೆ ಮನೋಜ್, ಉಪ ಮೇಯರ್‌ಗೆ ಭಾನುಮತಿ ಹೆಸರು ಅಂತಿಮಗೊಳಿಸಿದ ಬಿಜೆಪಿ

ಮಂಗಳೂರು : ಮನಪಾದ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿ ಸ್ಥಾನಕ್ಕೆ ಮನೋಜ್ ಹಾಗೂ ಉಪ ಮೇಯರ್ ಅಭ್ಯರ್ಥಿ ಸ್ಥಾನಕ್ಕೆ ಭಾನುಮತಿಯವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ.

ಮನಪಾದ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿಯಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 17 ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿಯಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 58ರ ಮನಪಾ ಸದಸ್ಯೆ ಭಾನುಮತಿ ಪಿ.ಎಸ್. ಅವರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಪ್ರಕ್ರಿಯೆ ದ.ಕ. ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಡೆದಿದೆ.

ಮಂಗಳೂರು ಮನಪಾ 25ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ನಾಳೆ ಬೆಳಗ್ಗೆ 11 ಗಂಟೆಗೆ ಮಂಗಳೂರು ಮನಪಾ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ