ಜೈಲಿನ ಜಾಮರ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರು ಜೈಲ್‌ನ ಜಾಮರ್‌ನಿಂದ ನೆಟ್‌ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಮೊಬೈಲ್‌ನ್ನು ನೆಲಕ್ಕೆ ಬಡಿದು ಹುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಜೈಲು ಅಧಿಕಾರಿಗಳು, ಆಡಳಿತ ವ್ಯವಸ್ಥೆ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಕಾರರು ಜೈಲಿನೊಳಗೆ ನುಗ್ಗಲು ಯತ್ನಿಸಿದ್ದಾರೆ. ಜೈಲು ಆವರಣದ ಪ್ರವೇಶ ದ್ವಾರ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಹಲವಾರು ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು