ತೈಲ ಬೆಲೆಯೇರಿಕೆ ಖಂಡಿಸಿ ಕಾರು, ಸ್ಕೂಟರ್ ತಳ್ಳಿಕೊಂಡು, ಭಿಕ್ಷೆಯೆತ್ತಿ ಪೆಟ್ರೋಲ್ ತುಂಬಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು : ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು. ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ ಬಂತು. ಬಳಿಕ ಬಿಜೆಪಿ ಕಚೇರಿ ಮುಂಭಾಗದಿಂದ ಅರ್ಧ ಕಿ.ಮೀ. ದೂರದ ಪೆಟ್ರೋಲ್ ಬಂಕ್‌ಗೆ ಸ್ಕೂಟರ್‌ಗಳನ್ನು ತಳ್ಳಿಕೊಂಡು, ಕಾರನ್ನು ಹಗ್ಗ ಕಟ್ಟಿ ಎಳೆದುಕೊಂಡು ತರಲಾಯಿತು. ಅಲ್ಲಿ ಭಿಕ್ಷೆಯೆತ್ತಿ ಹಣ ಸಂಗ್ರಹಿಸಲಾಯಿತು‌. ಬಳಿಕ ಗೆರಟೆಯಲ್ಲಿ, ಚೊಂಬುವಿನಲ್ಲಿ ಪೆಟ್ರೋಲ್ ಹಾಕಿಸಿ ಕಾರು, ಸ್ಕೂಟರ್‌ಗೆ ತುಂಬಿಸಲಾಯಿತು.

ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ