ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ; ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ

ಮಂಗಳೂರು : ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ‌ಮಾತನಾಡಿದ ಅವರು ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷಗಳಲ್ಲಿ ಅವರಿಗೆ ಅಭಿವೃದ್ಧಿ ಮಾಡುವ ಅವಕಾಶ ಇದೆ.‌ ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ವಿಶ್ವಾಸ ಇದೆ. ಕೋಟಾ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಹದಿನೇಳು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆಯ ಹಾದಿಯಲ್ಲಿದೆ ಎಂದರು.

ಕಳೆದ ಬಾರಿಗಿಂತ ಕಡಿಮೆ ಅಂತರದ ಗೆಲುವು ಹಿನ್ನಲೆಯ ಬಗ್ಗೆ ಪ್ರತಿಕ್ರಿಯೆ ‌ನೀಡಿದ ಅವರು ಸಹಜವಾಗಿ ಚುನಾವಣೆಯಲ್ಲಿ ವ್ಯತ್ಯಾಸಗಳಾಗುತ್ತದೆ. ಈ ಬಾರಿ ಕಾಂಗ್ರೆಸ್ ಗ್ಯಾರಂಟಿ, ಆಶ್ವಾಸನೆಗಳನ್ನು ನೀಡಿದೆ. ಆದರೂ ಬಿಜೆಪಿ ಒಂದೂವರೆ ಲಕ್ಷ ಮತಗಳ ಅಂತರದ ಜಯ ಪಡೆದಿದೆ ಎಂದರು.

ನಾನು ಕೇರಳದ ಸಹ ಪ್ರಭಾರಿಯಾಗಿ ಕೆಲಸ ಮಾಡಿದ್ದೆ. ಬಿಜೆಪಿ ಕೇರಳದಲ್ಲಿ ತನ್ನ ಅಕೌಂಟ್ ತೆರೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ