ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ.

ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು ಇನ್ನಾ ಗ್ರಾಮದಲ್ಲಿ ಟವರ್‌ ನಿರ್ಮಾಣಕ್ಕೆ ಹಲವು ಸಮಯದಿಂದ ಸರ್ವೇ ಕಾರ್ಯ ನಡೆಯುತ್ತಿತ್ತು. ಟವರ್‌ ನಿರ್ಮಾಣದಿಂದ ಕೃಷಿ ಭೂಮಿ ನಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಸಾಕಷ್ಟು ಹೋರಾಟ ನಡೆಸಿದ್ದರು. ಆದರೆ ಗುತ್ತಿಗೆದಾರ ಸಂಸ್ಥೆಯು ಪೊಲೀಸ್‌ ಭದ್ರತೆಯಲ್ಲಿ ಜೆಸಿಬಿ ಮೂಲಕ ಬೃಹತ್‌ ಹೊಂಡಗಳನ್ನು ನಿರ್ಮಿಸಿ ಕಾಮಗಾರಿಯನ್ನು ಆರಂಭಿಸಿತ್ತು. ಗುರುವಾರವೂ ಕಾಮಗಾರಿ ಆರಂಭವಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಜಿಲ್ಲಾಧಿಕಾರಿಗಳ ಆದೇಶವಿದೆ ಎಂದು ಹೇಳಿ ಕಂಪೆನಿಯ ಸಿಬಂದಿ ಪೊಲೀಸರ ಸಹಕಾರದಲ್ಲಿ ಕಾಮಗಾರಿ ನಡೆಸಿದರು. ಮಧ್ಯಾಹ್ನದ ವೇಳೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತವಾಗಿದೆ. ಇದರಿಂದ ಗ್ರಾಮಸ್ಥರು ಖುಷಿಗೊಂಡಿದ್ದು, ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ