ಟೀಮ್ ನೆಷನ್ ಫಸ್ಟ್ ವತಿಯಿಂದ ಜಿ ಶಂಕರ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಡುಪಿ : ಟೀಮ್ ನೆಷನ್ ಫಸ್ಟ್ ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣ‌ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಟೀಮ್ ನೇಷನ್ ಫಸ್ಟ್‌ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು. ಆದರೆ ಒಬ್ಬ ಸಾಮಾನ್ಯ ಮನುಷ್ಯ ರಕ್ತದಾನದ ಮೂಲಕ ಒಬ್ಬರ ಜೀವವನ್ನು ಉಳಿಸಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ ನಮ್ಮ ತಂಡದ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದುಕೊಂಡು ಅಗ್ನಿವೀರ್ ಸ್ಕೀಮ್‌ನ ಮೂಲಕ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಶಮಂತ್ ಕೆ ಸುಳ್ಯ ಇವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ರಾಜೇಂದ್ರ ಕೆ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡಾ. ರಾಮಚಂದ್ರ ಪಾಟ್ಕರ್ ದೈಹಿಕಶಿಕ್ಷಣ ನಿರ್ದೇಶಕರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ, ತಂಡದ ಉಪಾಧ್ಯಕ್ಷರಾದ ಡಾ. ಅತುಲ್ ಹಾಗೂ ಕೆಎಂಸಿಯ ಡಾ. ದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಂಡದ ಕಾರ್ಯದರ್ಶಿ ಸಾತ್ವಿಕ್ ಗಡಿಯಾರ್, ಸದಸ್ಯರಾದ ಸಂತೋಷ್ ಕರ್ಕೇರ, ಪೂಜಾ ಸೂರಜ್ ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ