ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಕಾರ್ಕಳ : ತಾಲೂಕಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಇದರ ಸಹಯೋಗದಲ್ಲಿ ಕಾರ್ಕಳ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ರಕ್ತದಾನ ಶಿಬಿರವನ್ನು ಕಾರ್ಕಳದ ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷರಾದ ಡಾ.ಕೆ.ಆರ್.ಜೋಷಿ ಉದ್ಘಾಟಿಸಿ, ರಕ್ತದಾನದ ಮಹತ್ವವನ್ನು ತಿಳಿಸಿದರು. ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಈ ಸಂದರ್ಭ ಎನ್.ಸಿ.ಸಿ. ಕಮಾಂಡಿಂಗ್ ಆಫಿಸರ್ ಕರ್ನಲ್ ರಾಹುಲ್ ಚೌಹಾನ್, ಲೆಫ್ಟಿನೆಂಟ್ ಕರ್ನಲ್ ಎಂ.ಎಸ್. ರಾವತ್, ಕಾರ್ಕಳ ಜ್ಞಾನಸುಧಾ ಸಿ.ಇ.ಒ. ಹಾಗೂ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ಎನ್.ಸಿ.ಸಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಜಿಲ್ಲೆಗಳ 450 ಎನ್.ಸಿ.ಸಿ. ಕೆಡೆಟ್‌ಗಳು ಶಿಬಿರದಲ್ಲಿ ಭಾಗವಹಿಸಿದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ