ಕಸದ ರಾಶಿಯಲ್ಲಿ ಶವ ಪತ್ತೆ – ಪ್ರಕರಣ ದಾಖಲು

ಹೆಬ್ರಿ : ಹೆಬ್ರಿ ಕೆಳಪೇಟೆ ಲಯನ್‌ ಸರ್ಕಲ್‌ನ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ.

ಸುಮಾರು 40ರಿಂದ 50 ವರ್ಷ ಪ್ರಾಯದ ವ್ಯಕ್ತಿ ಬಿಳಿ ಗೆರೆಗಳಿರುವ ನೀಲಿ ಬಣ್ಣದ ಬರ್ಮುಡಾ ಧರಿಸಿದ್ದು, ಅಂಗಾತ ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಇನ್ಯಾವುದೊ ಕಾರಣದಿಂದ ಮೃತಪಟ್ಟಿದ್ದಾನೋ ಎನ್ನುವುದು ತನಿಖೆಯಿಂದ ತಿಳಿಯಬೇಕಾಗಿದೆ. ಹೆಬ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ