ರುಂಡ ಮುಂಡ ಬೇರ್ಪಟ್ಟಿರುವ ಶವ‌ ಪತ್ತೆ : ಆತ್ಮಹತ್ಯೆ ಶಂಕೆ

ಮಣಿಪಾಲ : ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಗಂಡಸಿನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ‌ ನೇಣುಕುಣಿಕೆಯಲ್ಲಿ ಭಾರ‌ ತಡೆಯಲಾಗದೆ ದೇಹದಿಂದ ರುಂಡ ಬೆರ್ಪಟ್ಟಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಮಣಿಪಾಲ ಪೋಲಿಸ್ ಠಾಣೆ ಎ.ಎಸ್.ಐ ನಾಗೇಶ್ ನಾಯ್ಕ್, ಹೆಡ್ ಕಾನ್ ಸ್ಟೇಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯ‌ನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ