ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬಜ್ಪೆ : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ ಪಿಎಲ್‌ (MRPL) ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್‌ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ.

ಮೃತ ದುರ್ದೈವಿಯನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ತನ್ನ ವಿಸಿಲ್‌ ಗಾರ್ಡನ್ನು ಮರಕ್ಕೆ ಸುತ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಶಮಾನ್ ಅಲಿ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ ಪಿಎಲ್‌ (MRPL) ಅಧೀನ ಸಂಸ್ಥೆ ಒಎಂಪಿಎಲ್ ನಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದ. ಬೆಳಗ್ಗಿನ ಜಾವ 4 ಗಂಟೆಯ ವರೆಗೆ ಒಎಂಪಿಎಲ್‌ನ ಒಳಗೆ ಕೆಲಸದಲ್ಲಿ ನಿರತನಾಗಿರುವುದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿತ್ತು ಬಳಿಕ ನಾಪತ್ತೆಯಾಗಿದ್ದ. ಈ ಕುರಿತು ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ