ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ; ಮೊಬೈಲ್ ಕೊಡದ್ದಕ್ಕೆ ಆತ್ಮಹತ್ಯೆ?!

ಹಿರಿಯಡ್ಕ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಹಿಡಿಯಡ್ಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿದ್ದ. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ.

ಇಂದು ಬೆಳಿಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ