ನೀರನ್ನು ಕುದಿಸಿ ಕುಡಿಯಿರಿ – ಉಡುಪಿ ನಗರಸಭೆಯಿಂದ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್‌‌ಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂ, ಬಜೆ ನೀರು ಶುದ್ದೀಕರಣ ಘಟಕ (WTP) ಮಣಿಪಾಲ GSLR ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಸದರಿ ನೀರಿನ ಮಾದರಿಯನ್ನು ಪ್ರತೀ ತಿಂಗಳಿಗೊಮ್ಮೆ ಪರೀಕ್ಷಿಸಿ, ನೀರು ಕುಡಿಯಲು ಯೋಗ್ಯವಾಗಿರುವ ಬಗ್ಗೆ ವರದಿಯನ್ನು ಪಡೆಯಲಾಗುತ್ತಿರುತ್ತದೆ.

ಆದರೂ ಸಹ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಬಣ್ಣ ಬದಲಾಗಿದ್ದು, ಸದರಿ ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ