ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮಂಗಳೂರು : ಮಂಗಳೂರು ಅಂತ‌ರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.

ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು. ಈ ಸಂಬಂಧ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ.

ಭದ್ರತಾ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕ ಇಲ್ಲ ಎಂದು ದೃಢಪಡಿಸಿದ್ದಾರೆ.

ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇ-ಮೇಲ್ ಮೂಲಕ ಬಂದಿವೆ ಎಂದು ತಿಳಿದು ಬಂದಿದೆ. ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಎ. 29 ರಂದು ಮತ್ತು 2023ರ ಡಿ.26 ರಂದು ಬಾಂಬ್‌ ಬೆದರಿಕೆಯ ಇ ಮೇಲ್ ಬಂದಿತ್ತು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ