ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಪುಸ್ತಕ ವಿತರಣಾ ಕಾರ್ಯಕ್ರಮ”

ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಶ್ರೀ ಸತ್ಯ ಸಾಯಿ ವಿಧ್ಯಾ ಜ್ಯೋತಿ ಹಾಗೂ ಸತ್ಯ ಸಾಯಿ ಸೇವಾ ಸಮಿತಿ ಕುಂದಾಪುರ” ಇವರುಗಳ ವತಿಯಿಂದ “ಪುಸ್ತಕ ವಿತರಣಾ ಕಾರ್ಯಕ್ರಮ” ನಡೆಯಿತು.

ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕಗಳನ್ನು ವಿತರಿಸಲಾಯಿತು.

ಉಡುಪಿ ಜಿಲ್ಲೆಯ ಯುವ ಸಂಚಾಲಕರಾದ ಶ್ರೀ ಸಂದೀಪ್ ರಾವ್ ಅವರು ಸೇವಾ ಸಮಿತಿಯ ಆರೋಗ್ಯ ಸಂಬಂಧಿ ಸೇವೆಗಳ ಕುರಿತು ಮಾತನಾಡಿ ಅವಶ್ಯಕತೆ ಇರುವವರು ಆದರ ಸದುಪಯೋಗ ಪಡೆಯಲು ತಿಳಿಸಿದರು. ಸತ್ಯ ಸಾಯಿ ಸೇವಾ ಸಂಸ್ಥೆಯ ಸಮಾಜ ಮುಖಿ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕುಂದಾಪುರ ಸತ್ಯ ಸಾಯಿ ಸೇವಾ ಸಂಸ್ಥೆಯ ಸಂಚಾಲಕರಾದ ಶ್ರೀ ರಾಕೇಶ್, ಶ್ರೀಮತಿ ಸಾಕ್ಷಿ ರಾವ್, ಶ್ರೀಮತಿ ಉಷಾ ಮತ್ತು ಅಂಬಿಕಾ ಮತ್ತು ಸಂಸ್ಥೆಯ ಇತರ ಸದಸ್ಯರು ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ ಹಾಗೂ ಟ್ರಸ್ಟಿ ಶ್ರೀಮತಿ ಮನೋರಮಾ. ಕೆ ಉಪಸ್ಥಿತರಿದ್ದರು.

ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸುರೇಶ್. ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಪ್ರತಿಮಾ ವಂದಿಸಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ