ಆಟವಾಡುತ್ತಿದ್ದಾಗ ಹೃದಯಾಘಾತ; ಬಾಲಕ ಸಾವು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ.

ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಮೃತ ಬಾಲಕ.

ಮೇ 4ರಂದು ಮಧ್ಯಾಹ್ನಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫ‌ಲಕಾರಿಯಾಗಿಲ್ಲ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ