ಬಾಲಕ ಮನೆಗೆ ಬಾರದೆ ನಾಪತ್ತೆ – ಕೊಲ್ಲೂರು ಠಾಣೆಯಲ್ಲಿ ಪ್ರಕರಣ

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಬಾಲಕ ಒಂಬತ್ತನೇ ತರಗತಿಯಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಊರಿ‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮಾರ್ಚ್ 20ರಂದು ಮನೆಗೆ ಬರುವುದಾಗಿ ಹೇಳಿದವನು ಇದುವರೆಗೂ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾನೆ.

5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ : 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ : 08254-251031, 9480805434 (0820-2526444) ಸಂಪರ್ಕಿ‌ಸಬಹುದು ಎಂದು ಕೊಲ್ಲೂರು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ