ಮೇ 15ರಿಂದ 17ರವರೆಗೆ ಸುಕ್ಷೇತ್ರ ಗುರುಪುರ ಶ್ರೀಗುರುಮಹಾಕಾಲೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ

ಉಡುಪಿ : ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ ಮೇ. 15ರಿಂದ 17 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶ ಸಂಭ್ರಮ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಕುಂಜಾಡಿ ಬೀಡು ನಳಿನ್ ಕುಮಾರ್ ಕಟೀಲು ತಿಳಿಸಿದರು.
ಈ ಬಗ್ಗೆ ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವೇದ ಕೃಷಿಕ ಬ್ರಹ್ಮ‌ಋಷಿ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪತ್ರಿಷ್ಠಾ ಬ್ರಹ್ಮಕಲಶ ನೆರವೇರಲಿದೆ. ಮೇ 16 ರಂದು ಸಂಜೆ ನಡೆಯಲಿರುವ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ಕಾರ್ಯದಲ್ಲಿ ಜಾತಿ, ಪಂಗಡ, ಲಿಂಗಭೇದ ಇಲ್ಲದೇ ಭಾಗವಹಿಸಬಹುದಾಗಿದೆ. ದೇವರ ಬೃಹತ್ ಏಕಶಿಲಾ ಮೂರ್ತಿಗೆ ಪಂಚಕಲ್ಯಾಣ ಸ್ವರೂಪದ ಕಲಶಾಭೀಷೇಕವನ್ನು ಸಮರ್ಪಿಸಬಹುದಾಗಿದೆ ಎಂದರು.

ಮೇ 17 ರಂದು ಸಂಜೆ 6 ಗಂಟೆಗೆ ಶಿವಾನುಭವ ಮಂಟಪದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ವೇದ ಕೃಷಿಕ ಬ್ರಹ್ಮ‌ಋಷಿ ಕೆ.ಎಸ್. ನಿತ್ಯಾನಂದ ಸಾನಿಧ್ಯ ವಹಿಸಲಿದ್ದಾರೆ. ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಯಾಜಿ ನಿರಂಜನ್ ಭಟ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋಳಿದಡಿ ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ, ಅಂತರಾಷ್ಟ್ರೀಯ ಕ್ರೀಡಾಪಟು, ಚಲನಚಿತ್ರ ನಟ, ಸ್ವಾಗತ ಸಮಿತಿ‌ ಅಧ್ಯಕ್ಷ ರೋಹಿತ್ ಕುಮಾರ್ ಕಟೀಲ್, ಪ್ರಮುಖರಾದ ಚಂದ್ರಹಾಸ್ ಆಮೀನ್, ಸುಜಾತ ಸದಾಶಿವ, ದಿವಾಕರ್ ಉಪಸ್ಥಿತರಿದ್ದರು.

Related posts

ಟೋಲ್ ಸುಲಿಗೆಗೆ ಸದ್ಯ ಬ್ರೇಕ್; ಬಸ್ ಮಾಲಕರು ಖುಷ್

ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದಾಳಿ, ಓರ್ವ ಸೆರೆ

ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ : ಟಿ. ಅಶೋಕ್ ಪೈ