ಮನೆ, ದೇವಸ್ಥಾನದಲ್ಲಿ ಕಳವಿಗೆ ಯತ್ನ – ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಹರೆ ಸೆರೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಮಹಾತ್ಮಾನಗರ ಬಡಾವಣೆಯ ಮನೆ ಹಾಗೂ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿರುವ ಘಟನೆ ಘಟನೆ ನಡೆದಿದೆ.

ರವಿವಾರ 1.45ರ ನಸುಕಿನ ವೇಳೆ ಕಳ್ಳರು ಮನೆಯ ಮುಖ್ಯಗೇಟು ತೆರೆದು ಬಾಗಿಲ ಬಳಿಯಿದ್ದ ಮತ್ತೊಂದು ಸ್ಟೀಲ್‌ಗೇಟ್‌ ಅನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ. ಆಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿ ಎಲ್ಲಾ ಲೈಟ್‌ಗಳನ್ನು ಹಾಕಿದ್ದಾರೆ. ಈ ವೇಳೆ ಕಳ್ಳರು ಓಡಿ ಹೋಗಿದ್ದಾರೆ. ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕಾವೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ತಡರಾತ್ರಿ ಸುಮಾರು ನಾಲ್ವರಿದ್ದ ತಂಡ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿದೆ. ದೇವಸ್ಥಾನದ ಬಳಿ ಓಡಾಡುತ್ತಿದ್ದ ಕಳ್ಳರ ಕೈಯಲ್ಲಿದ್ದ ಟಾರ್ಚ್‌ನ ಬೆಳಕು ದೇವಸ್ಥಾನದ ಪಕ್ಕದ ಮನೆಯವರಿಗೆ ಕಂಡು ಅವರು ಎಚ್ಚರಗೊಂಡಿದ್ದಾರೆ. ಆ ಮನೆಯ ಹೊರಭಾಗದ ಲೈಟ್‌ಗಳನ್ನು ಹಾಕಿದಾಗ ಕೆಲವು ಮಂದಿ ದೇವಸ್ಥಾನದ ಬಳಿಯಿಂದ ಹೋಗುತ್ತಿರುವುದು ತಿಳಿದು ಬಂದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ