ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸಾವು

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಬಸ್‌ನಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ‌ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಚಾಲಕ ಭರತ್ (28) ಮೃತ ಬಸ್ ಚಾಲಕ.

ಕುಕ್ಕೆಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ವೇಳೆ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಲ್ಲದ ಪರಿಣಾಮ ತಪ್ಪಿದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!