ಉಪಚುನಾವಣೆ ಫಲಿತಾಂಶ ನಿಮ್ಮ ಭ್ರಷ್ಟಾಚಾರಕ್ಕೆ ಗ್ರೀನ್ ಸಿಗ್ನಲ್ ಅಲ್ಲ – ಸುನಿಲ್ ಕುಮಾರ್ ತಿರುಗೇಟು

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಹಾಗಂತ ಇದು ನಿಮ್ಮ ಭ್ರಷ್ಟಾಚಾರಗಳಿಗೆ ಗ್ರೀನ್ ಸಿಗ್ನಲ್ ಅಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೂರು ಸ್ಥಾನ ಗೆದ್ದ ತಕ್ಷಣ ಮುಖ್ಯಮಂತ್ರಿಗಳಿಗೆ ಹಗರಣಗಳಿಗೆ ಎನ್‌ಒಸಿ ಸಿಕ್ಕಿದೆ ಎಂದು ಅರ್ಥ ಅಲ್ಲ. ಸಾಮಾನ್ಯವಾಗಿ ಆಡಳಿತಾರೂಢ ಪಕ್ಷಗಳು ಉಪಚುನಾವಣೆಗಳಲ್ಲಿ ಗೆಲ್ಲುತ್ತವೆ. ಇದು ಸಹಜ ಕೂಡ. ಆದರೆ ರಾಜ್ಯ ಕಾಂಗ್ರೆಸ್ ನಾಯಕರ ಉಡಾಫೆ ಹೇಳಿಕೆಗಳನ್ನು ನೋಡಿದರೆ, ಅವರು ಮಾಡುವ ಭ್ರಷ್ಟಾಚಾರಕ್ಕೆ ಜನರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಭಾವಿಸಿದಂತಿದೆ. ಈ ಚುನಾವಣೆ ಫಲಿತಾಂಶದ ಕುರಿತು ಪಕ್ಷದ ಒಳಗೆ ಮತ್ತು ಪ್ರತಿ ವಿಧಾನಸಭೆ ವ್ಯಾಪ್ತಿಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ