ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು : ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ.

ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ತೆರಿಗೆಯ ಆದಾಯ ಹೆಚ್ಚಾಗಲಿದೆ. ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ ಮತ್ತು ಐಜಿಎಸ್‌ಟಿ ಮುಂತಾದ ಬಹುಸ್ಥರದ ತೆರಿಗೆಯ ಬದಲು ಸರಳ ಮತ್ತು ಏಕೀಕೃತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿ ಸರಳಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Related posts

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!