ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಅಧಿಕೃತ ಆದೇಶ

ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ.

ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆ.21ರ ಬುಧವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಸೊರಕೆ‌ಯವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸಚಿವ ಸತೀಶ್ ಜಾರಕಿಹೊಳಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿವರಿಸಿತ್ತು.

ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಅಧಿಕೃತವಾಗಿ ಟೋಲ್‌ಗೇಟ್ ನಿರ್ಮಾಣ ಕಾರ್ಯ ರದ್ದಾಗಿದೆ ಎಂದು ಆದೇಶ ಪತ್ರವನ್ನು ರವಾನಿಸಿದ್ದಾರೆ.

ಹೋರಾಟಕ್ಕೆ ಸಹಕರಿಸಿ ಬೆಂಬಲಿಸಿದ ಎಲ್ಲಾ ಸಾರ್ವಜನಿಕರಿಗೂ ಸಂಘಸಂಸ್ಥೆಗಳಿಗೂ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ವಿನಯ್ ಕುಮಾರ್ ಸೊರಕೆ ಮತ್ತು ಕಾಪು ಕಾಂಗ್ರೆಸ್ ಪಕ್ಷದ ಮುಖಂಡರು ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ