ಉಡುಪಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸಂತೋಷ್ ಕುಲಾಲ್ ಪಕ್ಕಾಲು, ಯತೀಶ್ ಕರ್ಕೇರ, ದೀಪಕ್ ಕೋಟ್ಯಾನ್ ಮೊದಲಾದವರು ಇದ್ದರು.