ಗಾಂಜಾ ಸೇವನೆ ದೃಢ – ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿ ಹಯಗ್ರೀವ ನಗರ 5ನೇ ಕ್ರಾಸ್‌ ಬಳಿ ಐವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಣಿಪಾಲದ ವಿದ್ಯಾರ್ಥಿಗಳಾದ ಅಶೀಲ (20), ರೆನಜೋ ಎಸ್‌. ಚಂದ್ರಗಿರಿ(20), ಅಭಿನವ ಸುರೇಶ್(20), ಶ್ರೀಹರಿ(19), ಅಭಿಜಿತ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಆ ವರದಿಯಲ್ಲಿ ಇವರೆಲ್ಲ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ