ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ದರ್ಶನ ಪಡೆದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಣಿಪಾಲ : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಇಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಸರಳೆಬೆಟ್ಟು ಮಣಿಪಾಲ ಇಲ್ಲಿಗೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಹಾಗೂ ಇಂದಿನ ಅನ್ನ ಸಂತರ್ಪಣೆ ಸೇವೆಯನ್ನು ಒದಗಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಮಹೇಶ್ ಠಾಕೂರ್,‌ ಶ್ರೀ ಶುಭಕರ ಸಾಮಂತ್, ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ದಿನೇಶ್ ಪ್ರಭು, ಟ್ರಸ್ಟಿಗಳಾದ ಸತೀಶ್ ಪಾಟೀಲ್, ಮಂಗಳೂರು ಬಿಜೆಪಿ ಕೋಶಾಧಿಕಾರಿಗಳಾದ ಸಂಜಯ್ ಪ್ರಭು, ದೇವಸ್ಥಾನದ ಕೋಶಾಧಿಕಾರಿ ಶ್ರೀಕಾಂತ್ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎ.18ರಂದು “ಕೋರ” ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆ

ಜೈಲಿನ ಜಾಮರ್‌ನಿಂದ ಸಾರ್ವಜನಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ