ತುಳು ನಾಟಕ ಕಲಾವಿದರ ತಂಡ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಕಲಾವಿದರು ಪಾರು

ಮಣಿಪಾಲ : ಮಣಿಪಾಲದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್‌ ಬಳಿ ಭಾನುವಾರ ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

ಉಡುಪಿಯ ಹೀರೆಬೆಟ್ಟುವಿನಲ್ಲಿ ಇಂದು ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ಖ್ಯಾತಿಯ ದೇವದಾಸ್ ಕಾಪಿಕಾಡ್ ಅವರ ನಾಟಕ ತಂಡದ ಸದಸ್ಯರು ಕಾರಿನಲ್ಲಿ ಸಂಚರಿಸುತ್ತಿದ್ದು, ಇದರಲ್ಲಿ ತುಳು ನಾಟಕದ ಕಲಾವಿದ ಭೋಜರಾಜ ವಾಮಂಜೂ‌ರ್ ಸಹಿತ ಹಲವರಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ತಂಡದ ಕಲಾವಿದರೆಲ್ಲರೂ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ