ಕಾರು ಹಾಗೂ ರಿಕ್ಷಾ ಮುಖಾಮುಖಿ ಡಿಕ್ಕಿ : ಅಪಘಾತದಲ್ಲಿ ರಿಕ್ಷಾ ಚಾಲಕ ಮತ್ತು ಪ್ರಯಾಣಿಕನಿಗೆ ಗಾಯ..!

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ರಿಕ್ಷಾ ಚಾಲಕ ಪೂರ್ಣೇಶ್‌ ಮತ್ತು ಪ್ರಯಾಣಿಕರಾದ ನೂರ್‌ ಸಾಹೇಬ್‌ ಎಂದು ಗುರುತಿಸಲಾಗಿದೆ.

ಕೇರಳದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ