ಡಿವೈಡರ್‌ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು, ನಾಲ್ವರಿಗೆ ಗಾಯ

ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲುಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯೆಲ್ಲಾ ಕಾರಿನ ಬಿಡಿಭಾಗಗಳು ಹರಡಿಕೊಂಡು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.

ಇನ್ನು ಕಾರಿನ ಕಾರಿನ ಇಂಜಿನ್ ಬೇರ್ಪಟ್ಟು ಮಾರುದೂರ ಹೋಗಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದ್ದು ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯಗಳಾಗಿರುವ ಸಾಧ್ಯತೆಗಳಿವೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ