ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ

ಉಡುಪಿ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ.

ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಚಾಲಕ‌ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ.

ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ