ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ.

ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಕಾರು ಕಳವಾಗಿತ್ತು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ನೀಡಿರುವ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ಪೊಲೀಸ್‌ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ಆರೋಪಿ ಪೌಜಾನ್‌ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾಧೀನಪಡಿಸಿಕೊಂಡಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ರಕ್ಷಕ್ ನೆಟ್ವರ್ಕ್ ಆ್ಯಂಡ್ ಸೆಕ್ಯೂರಿಟಿ ಸಲ್ಯೂಷನ್ ಸಂಸ್ಥೆ ಈ ಕಾರ್ಯಾಚರಣೆಯಲ್ಲಿ ಸಹಕರಿಸಿತ್ತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ