ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ – ಸವಾರ ಸಾವು

ಮಣಿಪಾಲ : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ರಾಘವೇಂದ್ರ (49) ಮೃತ ಸವಾರ.

ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ