ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೇಲೆಯೂ ನಿಗಾ ವಹಿಸಲಾಗುತ್ತಿದೆ‌ ಎಂದು ತಿಳಿಸಿದ್ದಾರೆ.

ಬಜರಂಗದಳದ ಪುನೀತ್ ಅತ್ತಾವರರನ್ನು ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ ಎಂದು ಮಾಹಿತಿ ಲಭಿಸಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು