ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ : ಶಾಸಕ ಭರತ್ ಶೆಟ್ಟಿಗೆ ಕಾವೂರು ಪೊಲೀಸ್ ಠಾಣೆಯಿಂದ ನೋಟೀಸ್‌ ಜಾರಿ

ಮಂಗಳೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.

ಮೂರು ದಿನಗಳ ಒಳಗಾಗಿ ಈ ಸಂಬಂಧ ಪೊಲೀಸ್ ಠಾಣೆಗೆ ಹಾಜರಾಗುವಂತೆ ಕಾವೂರು ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಬೈಂದೂರು ನೋಟೀಸ್ ಜಾರಿಗೊಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿರುವ ದೂರಿನಂತೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ