ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ – ಆರೋಪಿ ಅರೆಸ್ಟ್

ಮಂಗಳೂರು : ನಗರದ ಯೆಯ್ಯಾಡಿಯಲ್ಲಿನ ದಂಡಕೇರಿಯ ಮನೆಯೊಂದರಿಂದ ಚಿನ್ನಾಭರಣ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಯೆಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ.

ಮನೆಯೊಡತಿ ಮಮತಾ ಅವರು ಆ.25ರಂದು ಮನೆಯಿಂದ ಹೊರಗಡೆ ಹೋಗುವಾಗ ಬಾಗಿಲಿನ ಬೀಗ ಹಾಕಿ ಕೀಯನ್ನು ಮನೆಯ ಹೊರಗಡೆ ಇರುವ ಮೀಟರ್ ಬೋರ್ಡ್ ಮೇಲೆ ಇಟ್ಟಿದ್ದರು. ಆ.28ರಂದು ಅವರು ಮನೆಗೆ ಬಂದು ನೋಡಿದಾಗ ಚಿನ್ನದ ಉಂಗುರಗಳು, ಬ್ರೇಸ್‌ಲೆಟ್ ಸಹಿತ ಚಿನ್ನಾಭರಣ ಕಳುವಾಗಿತ್ತು. ಈ ಬಗ್ಗೆ ಆ.31ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟ‌ರ್ ವಶಪಡಿಸಿಕೊಳ್ಳ‌ಲಾಗಿದೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours